ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿನಿ ಮನಸ್ವಿ ಉಡುಪ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ

0
8

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾಸಂಸ್ಥಾನ್ ಸಂಬಂಧಿತ ರಾಷ್ಟ್ರ ಮಟ್ಟದ ಗಣಿತ ಮೇಳವು ಜಾರ್ಖಂಡ್ ನಲ್ಲಿ ಇತ್ತೀಚೆಗೆ ನಡೆಯಿತು.

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಮನಸ್ವಿ ಉಡುಪ ಇವರು ಗಣಿತ ಮಾದರಿ ನವಚಾರಿತ ಪ್ರದರ್ಶನದಲ್ಲಿ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಪುಷ್ಪ ನೀಡಿ,ಸಿಹಿ ತಿನಿಸಿ, ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅಮೃತ ವಿದ್ಯಾಲಯ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶಕುಂತಲಾ, ತರಬೇತಿ ನೀಡಿದ ಸಂಸ್ಥೆಯ ಶಿಕ್ಷಕಿ ಪ್ರಜಾತಾ , ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ಪೋಷಕರಾದ ಲೀಲಾವತಿ ಉಡುಪ, ರಾಮಚಂದ್ರ ಉಡುಪ ಮತ್ತು ಗುರು ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು . ಸಾಧಕಿ ವಿದ್ಯಾರ್ಥಿನಿಯನ್ನು ಸರತಿ ಸಾಲಿನಲ್ಲಿ ಎಲ್ಲರೂ ಅಭಿನಂದಿಸಿದರು.