
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಾಣಿ, ಜನಜಾಗೃತಿ ವೇದಿಕೆ ಮಾಣಿ ವಲಯದ ಸಹಯೋಗದಲ್ಲಿ ಇಡ್ಕಿದು ಗ್ರಾಮದ ಸೂರ್ಯ ಸರಕಾರಿ ಪ್ರೌಢಶಾಲೆ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ದುಶ್ಚಟಕ್ಕೆ. ಬಲಿ ಬೀಳುವ ಸಾಧ್ಯತೆ ದುಶ್ಚಟ ದಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಮಾಣಿ ವಲಯದ ಮೇಲ್ವಿಚಾರಕಿ ಆಶಾಪಾರ್ವತಿ ಸ್ವಾಗತಿಸಿ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹ ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಮುಖ್ಯ ಶಿಕ್ಷಕರಾದ ಸುಚೇತಾರವರು ಧನ್ಯವಾದವಿತ್ತರು. ಸೇವಾಪ್ರತಿನಿಧಿ ಪುಷ್ಪಲತಾ ಸಹಕರಿಸಿದರು.
