ಮೈರ್ಪಾಡಿ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

0
4

ಕುಳಾಯಿ : ಹಿಂದೂ ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ನವೆಂಬರ್ 26ರಂದು ವಾರ್ಷಿಕೋತ್ಸವ ಸಮಾರಂಭವು ಸಂಭ್ರಮದಿಂದ ನಡೆಯಿತು.

ಬೆಳಗ್ಗೆ ನಡೆದ ಆಟೋಟ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರಿನ ನಿವೃತ್ತ ಬಿಎಸ್‌ಎನ್‌ಎಲ್ ಉದ್ಯೋಗಿ ಹಾಗೂ ವರ್ಕಾಡಿಯ ಶ್ರೀ ರಾಮಕೃಷ್ಣ ಹೊಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಹಾಗೂ ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿ ಪ್ರಸನ್ನ ಮೈರ್ಪಾಡಿ, ಶಾಲಾ ಸಂಚಾಲಕಿ ಕೆ. ಕಲಾವತಿ ಹಾಗೂ ಮುಖ್ಯ ಶಿಕ್ಷಕ ಶ್ರೀ ಗೋಪಾಲ್.ವಿ ಉಪಸ್ಥಿತರಿದ್ದರು.

ಸಂಜೆ ನಡೆದ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ವಿದ್ಯಾದಾಯಿನೀ ಸಂಘದ ಗೌರವಾನ್ವಿತ ಕಾರ್ಯದರ್ಶಿ ಶ್ರೀರಂಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಹಳೆ ವಿದ್ಯಾರ್ಥಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ, ಕುಳಾಯಿ ಇದರ ಮಾಜಿ ಅಧ್ಯಕ್ಷ ಪ್ರಭಾಕರ್ ಕುಳಾಯಿ, ಶಾಲಾ ಹಳೆ ವಿದ್ಯಾರ್ಥಿನಿ ಶ್ಯಾಮಲಾ ಶುಭಕರನ್, ಸಂಚಾಲಕಿ ಕೆ. ಕಲಾವತಿ ಹಾಗೂ ಮುಖ್ಯೋಪಾಧ್ಯಾಯ ಗೋಪಾಲ್.ವಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಲ್ಲದೆ, ನೃತ್ಯ ಸಂಯೋಜನೆ ಮಾಡಿದ ವಿದುಷಿ ಭಾರತಿ, ಶಾಲೆಯ ಹಳೆ ವಿದ್ಯಾರ್ಥಿ ಶ್ರೀ ಅಕ್ಷಯ ಕುಮಾರ ಕುಳಾಯಿ ಹಾಗೂ ಯಕ್ಷಗಾನ ಗುರು ಶ್ರೀಮತಿ ಪೂರ್ಣಿಮಾ ಯತೀಶ್ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನೃತ್ಯ, ಯಕ್ಷಗಾನ ಸೇರಿದಂತೆ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಗಳು ವಾರ್ಷಿಕೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದವು.

ಶಾಲಾ ಸಂಚಾಲಕಿ ಕೆ. ಕಲಾವತಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಗೋಪಾಲ್.ವಿ ವಾರ್ಷಿಕ ವರದಿ ವಾಚಿಸಿದರು. ಸಹಶಿಕ್ಷಕ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಮಲಕಪ್ಪ ಹನುಮಪ್ಪ ವಂದಿಸಿದರು.

ಕಾರ್ಯಕ್ರಮದಲ್ಲಿ ಹಿಂದೂ ವಿದ್ಯಾದಾಯಿನೀ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.