ಕಾರ್ನಾಡ್ ನಿವಾಸಿ ಇಂದಿರಾ ದೇಜಪ್ಪ ಅನಾರೋಗ್ಯದಿಂದ ನಿಧನ

0
226

ಮುಲ್ಕಿ: ಕಾರ್ನಾಡ್ ಸರಕಾರಿ ಆಸ್ಪತ್ರೆ ಬಳಿಯ ನಿವಾಸಿ ಇಂದಿರಾ ದೇಜಪ್ಪ (72) ಅನಾರೋಗ್ಯದಿಂದ ಗುರುವಾರ ನಿಧನರಾದರು ಅವರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಅಂಗನವಾಡಿ ಶಿಕ್ಷಕಿಯಾಗಿ,ಮುಲ್ಕಿ ನಗರ ಪಂಚಾಯತ್ ಮಾಜೀ ಸದಸ್ಯರಾಗಿ, ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿ ಸಮಾಜಕ್ಕೆ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಮಾಜೀ ಸಚಿವ ಅಭಯ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್ , ಮುಲ್ಕಿ ನಗರ ಪಂಚಾಯತ್ ಸದಸ್ಯ ಪುತ್ತುಭಾವ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಶರತ್ ಕಾರ್ನಾಡ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here