ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ಸೋಮವಾರ ಭಾರತ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ದೀಪ ಬೆಳಗಿಸುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದವರು ಡಾ. ಬಿ. ಆರ್. ಅಂಬೇಡ್ಕರ್ ಅವರಷ್ಟು ಡಿಗ್ರಿ ಪಡೆದವರು ದೇಶದಲ್ಲಿ ಯಾರಿಲ್ಲ, ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಲೇ ಬೇಕೆಂದರು.
ಕಾರ್ಯಕ್ರಮದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ಪುಪ್ಪ ಕುಲಾಲ್, ಸುರೇಶ್ ಪೂಜಾರಿ, ಶಾಂತರಾಮ್ ಕುಲಾಲ್, ಪ್ರದೀಪ್ ಸುವರ್ಣ ಮೊದಲಾದವರಿದ್ದರು.
Home Uncategorized ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ...