ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿ ಜೆ ಇ ಇ ಮತ್ತು ನೀಟ್ ನಲ್ಲಿ ಸಾಧನೆ ಮಾಡಲು ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಥಮ ಪಿಯುಸಿ ತರಗತಿ ಆರಂಭಗೊಂಡಿತು. ಭೌತಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಾಗಿರುವ ಶ್ರೀಯುತ ರಮೇಶ್ ಹಂದೆ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ದಿನ ಆರಂಭವಾಗುತ್ತಿರುವ ತರಗತಿಯಲ್ಲಿ ಇರುವಂತಹ ವಿದ್ಯಾರ್ಥಿಗಳಾದ ನೀವು ಸ್ಪರ್ಧಾತ್ಮಕ ಓಟದಲ್ಲಿ ಮುಂದೆ ಇದ್ದೀರಿ. ದೊಡ್ಡ ದೊಡ್ಡ ನಗರಗಳಲ್ಲಿ ಸಿಗುವಂತಹ ಶಿಕ್ಷಣ ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ರಾಮೀಣ ಪ್ರದೇಶವಾದ ಹೆಬ್ರಿಯ ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ದೊರೆಯುತ್ತಿದೆ. ಹಾಗಾಗಿ ತಾವೆಲ್ಲ ಧನ್ಯರು .ಈ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು , ಜೀವನದಲ್ಲಿ ಉನ್ನತ ಸ್ಥಾನಮಾನವನ್ನು ತಲುಪಿ ಎಂದು ಹಾರೈಸಿದರು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಮರೇಶ್ ಹೆಗ್ಡೆಯವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಧಿಸಬೇಕಾದರೆ ಬಹಳಷ್ಟು ಹೋರಾಟ ಮಾಡಬೇಕಾಗಿದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅಮೃತ ಭಾರತಿ ಕಳೆದ ನಾಲ್ಕು ವರ್ಷಗಳಿಂದ ವಿಶೇಷ ಇಂಟಿಗ್ರೇಟೆಡ್ ತರಗತಿಗಳನ್ನು ನಡೆಸಿಕೊಂಡು ಬರುತ್ತಿದ್ದು , ಸಾಕಷ್ಟು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ. ಈ ವಿಶೇಷ ತರಗತಿಯ ಅವಕಾಶವನ್ನು ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ತಕ್ಷಣದಲ್ಲಿ ಸಂಸ್ಥೆಯನ್ನು ಸಂಪರ್ಕಿಸಿ ಸೇರ್ಪಡೆಗೊಳ್ಳುವಂತೆ ವಿನಂತಿಸಿದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ, ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕರಾದ ಸುದರ್ಶನ್ ಶೆಟ್ಟಿ ಕಾರ್ಯಕ್ರಮ ಸಂಘಟಿಸಿ, ವಿದ್ಯಾರ್ಥಿಗಳಾದ ಸುತೇಜ ಸ್ವಾಗತಿಸಿ , ಅನ್ನಪೂರ್ಣ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದಳು. ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

