ಶಿವಪುರ ಯಳಗೋಳಿ : ಶಿವಪುರ ಗ್ರಾಮದ ಎಳಗೋಳಿ ಚಿಟ್ಟೆಬೆಟ್ಟು ಸಪರಿವಾರ ಸಹಿತ ಶ್ರೀ ನಾಗಬ್ರಹ್ಮಲಿಂಗೇಶ್ವರ ಸನ್ನಿಧಿಯಲ್ಲಿ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪುನಃಪ್ರತಿಷ್ಠೆ, ಆಶ್ಲೇಷ ಬಲಿ, ನಾಗದರ್ಶನ , ಅನ್ನಸಂತರ್ಪಣೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳು ಭಾನುವಾರ ನಡೆಯಿತು.
ವೇದಮೂರ್ತಿ ಶಿವಪುರ ವಾಸುದೇವ ಭಟ್ ನೇತ್ರತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ವಿವಿಧ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೊಡುಗೆ ನೀಡಿದ ಎಳಗೋಳಿ ಚಿಟ್ಟೆಬೆಟ್ಟು ಕುಟುಂಬದ ಉದ್ಯಮಿ ಹರೀಶ್ ಶೆಟ್ಟಿ ದಂಪತಿಯನ್ನು ಇದೇ ಸಂದರ್ಭದಲ್ಲಿ ವಿವಿಧ ಸರ್ಕಾರಿ ಶಾಲೆಗಳ ಪರವಾಗಿ ಅರ್ಚಕ ವಾಸುದೇವ ಭಟ್ ಸನ್ಮಾನಿಸಿದರು.
ಮುಖಂಡರಾದ ಹೆಬ್ರಿ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೀತಾನದಿ ವಿಜೇಂದ್ರ ಶೆಟ್ಟಿ ನೇತ್ರತ್ವದಲ್ಲಿ ಸನ್ಮಾನ ನಡೆಯಿತು.
ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದಿವಾಕರ ಮರಕಾಲ ಎಸ್, ಹೆಬ್ರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ತಿಪ್ಪೇಸ್ವಾಮಿ, ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಗುಲಾಬಿ ಅಣ್ಣಪ್ಪ ಕುಲಾಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಶಿವಪುರದ ಮುಖಂಡ ಹುಣ್ಸೆಯಡಿ ಸುರೇಶ ಶೆಟ್ಟಿ, ಯಳಗೋಳಿ ಚಿಟ್ಟೆಬೆಟ್ಟು ಕುಟುಂಬಸ್ಥರು, ಮೂಲಸ್ಥಾನದವರು, ವಿವಿಧ ಗಣ್ಯರು ಉಪಸ್ಥಿತರಿದ್ದರು.
ಎಳಗೋಳಿ ಚಿಟ್ಟೆಬೆಟ್ಟು ಚೈತನ್ಯ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು