ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸಿಂಹಾಚಲಂ ದೇವಾಲಯದ ಗೋಡೆ ಕುಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸಿಂಹಗಿರಿ ಬಸ್ ನಿಲ್ದಾಣದಿಂದ ಘಾಟ್ ರಸ್ತೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಬಳಿ 300 ರೂಪಾಯಿ ಟಿಕೆಟ್ ಗಾಗಿ ಭಕ್ತರು ಸರದಿಯಲ್ಲಿ ನಿಂತಿದ್ದಾಗ ಗೋಡೆ ಕುಸಿದು ಬಿದ್ದಿದೆ. ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಚಂದನಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.