ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೇಳುವ ಸುಳಿವಿನ ಹಿನ್ನೆಲೆಯಲ್ಲಿ ಎಡಿಜಿಪಿ ಹಿತೇಂದ್ರ ನಗರಕ್ಕೆ ಭೇಟಿ ನೀಡಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಾತನಾಡಿದ್ದಾರೆ. ಘಟನೆ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.