ಕಾರ್ಕಳ : ಕರ್ನಾಟಕ ಸರಕಾರ ಪಠ್ಯಕ್ರಮದ 2024-25ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ. 62.34 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ (91.12%) ಮೊದಲ ಸ್ಥಾನ ಗಳಿಸಿದೆ. ಉಡುಪಿ (89.96%) ಎರಡನೇ ಸ್ಥಾನ ಪಡೆದರೆ, ಉತ್ತರಕನ್ನಡ (83.19%) ಮೂರನೇ ಸ್ಥಾನ ಪಡೆದಿದೆ. ಕಲಬುರುಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ.
22 ವಿದ್ಯಾರ್ಥಿಗಳು 625/625 ಅಂಕಗಳನ್ನು ಪಡೆದಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.
ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವುದು ಹೇಗೆ ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in a https://karresults.nic.in ,
ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಬಳಿಕ, SSLC Karnataka.gov.in ನಲ್ಲಿ ಆನ್‌ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ