ಪ್ರತೀಕಾರ ಯತ್ನ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

0
839

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್​ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ ಮಾಡಿತ್ತು. ಇದೀಗ ಕಾವೂರು ಪೊಲೀಸರು ಲೋಕೇಶ್​​ನನ್ನು ಬಂಧಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ನಂತರ ಮಂಗಳೂರಿನ ಮೂರು ಕಡೆ ಚಾಕು ಇರಿತ ಪ್ರಕರಣಗಳು ವರದಿಯಾಗಿದ್ದವು. ಒಟ್ಟಾರೆಯಾಗಿ 7 ಮಂದಿಯನ್ನು ಬಂಧಿಸಲಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆ ಹಾಕಲಾಗಿತ್ತು.

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್‌ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವೈರಲ್ ಆಗಿತ್ತು.

“ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುತ್ತೇವೆ” ಎಂದು ಭರತ್ ಕುಮ್ಡೇಲ್ ಹೆಸರು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದರು. ಹೀಗಾಗಿ, ಸೋಮವಾರವೇ ಮಂಗಳೂರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಹಾಗೂ ಫುಟ್ಪಾತ್ ವ್ಯಾಪಾರಿಗಳನ್ನು ರಾತ್ರಿ 9:30ರ ಒಳಗೆ ತೆರವುಗೊಳಿಸುವ ಪ್ರಕ್ರಿಯೆ ಶುರುವಾಗಿತ್ತು.

LEAVE A REPLY

Please enter your comment!
Please enter your name here