ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ

0
409

ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ದಾಳಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಾವಲು ಪಡೆ ಪೊಲೀಸರು ಅರಬ್ಬೀ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಮಂಗಳೂರಿನ ಬಂದರು ತೀರದಲ್ಲಿ ಪರಿಶೀಲನೆ ನಡೆಸಿದಿದ್ದಾರೆ. ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್, ಮೀನುಗಾರರನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಪೊಲೀಸರು ಮೀನುಗಾರರ ದಾಖಲೆಗಳನ್ನ ತಪಾಸಣೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಅನುಮಾನಾಸ್ಪದ ಬೋಟ್‌ಗಳ ಮೇಲೆ ನಿಗಾ ಇಟ್ಟಿದ್ದಾರೆ.

LEAVE A REPLY

Please enter your comment!
Please enter your name here