ಬೆಳಾಲು : ಮೇ 07 ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್ ಮತ್ತು ಯಶೋಧ ದಂಪತಿಗಳ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ
ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ಶ್ರೀಮತಿ ತುಳಸಿ ಉಮೇಶ್ ಮಾಲಾಡಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಇವರುಗಳು ಉಪಸ್ಥಿತರಿದ್ದರು.