ಹೆಬ್ರಿ : ಹೆಬ್ರಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಸಾಮಾಜಿಕ ಹೋರಾಟಗಾರ ಹೆಚ್.ಕೆ.ಶ್ರೀಧರ ಶೆಟ್ಟಿ ಮನವಿ ಮಾಡಿದ್ದಾರೆ. ಹೆಬ್ರಿ ಸರ್ಕಾರಿ ಆಸ್ಪತ್ರೆಗೆ ದಿನನಿತ್ಯವೂ ನೂರಾರು ಮಂದಿ ಚಿಕಿತ್ಸೆಗಾಗಿ ಹೆಬ್ರಿ ತಾಲ್ಲೂಕು ವ್ಯಾಪ್ತಿ ಸೇರಿ ದೂರದ ಪ್ರದೇಶಗಳಿಂದ ಬರುತ್ತಾರೆ. ಹೆಚ್ಚಿನ ಸವಲತ್ತು ಇಲ್ಲದೆ ಜನತೆಗೆ ಸಮಸ್ಯೆಯಾಗುತ್ತಿದೆ. ಹೆಬ್ರಿ ತಾಲ್ಲೂಕು ಆಗಿ ಹಲವಾರು ವರ್ಷಗಳು ಕಳೆದಿದೆ. ಹೆಬ್ರಿ ಸರ್ಕಾರಿ ಆಸ್ಪತ್ರೆಯನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದರೆ ಹೆಚ್ಚಿನ ಸವಲತ್ತುಗಳು ದೊರೆಯಲಿದೆ. ಶೀಘ್ರವಾಗಿ ಮೇಲ್ದರ್ಜೆಗೇರಿಸುವಂತೆ ರಾಜ್ಯ ಆರೋಗ್ಯ ಸಚಿವ ದಿನೇಶ ಗುಂಡೂ ರಾವ್ ಮತ್ತು ಮುಖ್ಯಮಂತ್ರಿಯವರಿಗೆ ಹೆಚ್.ಕೆ.ಶ್ರೀಧರ ಶೆಟ್ಟಿ ಮನವಿ ಸಲ್ಲಿಸಿದ್ದಾರೆ.