ಸಮಗ್ರ ಬುಡಕಟ್ಟು ಯೋಜನಾ ಇಲಾಖೆ ಉಡುಪಿ, ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಮತ್ತು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ – ಕೇರಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಶಿರ್ವ ಸಮೀಪದ ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ ಮಾತನಾಡುತ್ತಾ ಶಿಕ್ಷಣದ ಪ್ರಾಮುಖ್ಯತೆಯ ಕುರಿತು ಮಾತನಾಡುತ್ತಾ ಕೊರಗ ಮಕ್ಕಳು ಶಿಕ್ಷಣದಲ್ಲಿ ಸಾಧನೆಗಳನ್ನು ಮಾಡಬೇಕು ಎಂದರು. ಕೊರಗ ಮಕ್ಕಳ ಶಿಕ್ಷಣಕ್ಕೆ ಸರಕಾರದಿಂದ ಪಡೆಯಬಹುದಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ನಂತರ ವೇದಿಕೆಯಲ್ಲಿ ಉಪಸ್ಥಿತರಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಸಬಿತಾ ಗುಂಡ್ಮಿ ಮತ್ತು ಡಾ. ದಿನಕರ ಕೆಂಜೂರುರವರು ಮಕ್ಕಳಿಗೆ ಶುಭ ಹಾರೈಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೊರಗ ಸಂಘಗಳ ಒಕ್ಕೂಟದ ಅಧ್ಯಕ್ಷ ರಾದ ಸುಶೀಲ ನಾಡ ವಹಿಸಿದ್ದರು.
ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಐಟಿಡಿಪಿ ಅಧಿಕಾರಿ ನಾರಾಯಣ ಸ್ವಾಮಿ ಇವರು ಪ್ರಮಾಣಪತ್ರ ನೀಡಿ ಶುಭವನ್ನು ಕೋರಿದರು.
ಮಕ್ಕಳಿಂದ ಅದ್ಭುತವಾದ ನಾಟಕ,ಮತ್ತು ನೃತ್ಯ ಪ್ರದರ್ಶನ ನಡೆಯಿತು. ಸಾಮೂಹಿಕ ಡೋಲು ನೃತ್ಯದೊಂದಿಗೆ ಶಿಬಿರವು ಮುಕ್ತಾಯವಾಯಿತು.
ಶಿಬಿರಾರ್ಥಿ ಸೌಜನ್ ವಂದಿಸಿದರೆ, ವಲ್ಮ ಇನ್ನ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ನಿರೂಪಣೆಗೈದರು.