ಮೂಡುಬಿದಿರೆ: ರಾಜೀವ್ ಗಾಂಧಿ ಸಂಕೀರ್ಣದ ಎದುರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ತಾತ್ಕಾಲಿಕ ಪರಿಹಾರ

0
196

ಮೂಡುಬಿದಿರೆ ಜನರ ಪ್ರಮುಖ ಬೇಡಿಕೆಯಾಗಿದ್ದ ಮೂಡುಬಿದಿರೆಯ ಹೃದಯ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ಅಧಿಕೃತಗೊಳಿಸಲು ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು.

ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಪುರಸಭೆ, ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಜಂಟಿಯಾಗಿ ಮೂಡುಬಿದಿರೆ ರಾಜೀವ್ ಗಾಂಧಿ ವಾಣಿಜ್ಯ ಸಂರ್ಕೀಣದ ಮುಂಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಧರ್ಮಸ್ಥಳ-ಉಡುಪಿ, ಕಾರ್ಕಳ- ಮಂಗಳೂರು ರಾಜ್ಯ ಸಾರಿಗೆ ಬಸ್‌ಗಳು ಮೂಡುಬಿದಿರೆ ಮೂಲಕ ಸಂಚರಿಸುವಾಗ ಪ್ರಯಾಣಿಕರನ್ನು ಬಸ್‌ಗೆ ಹತ್ತಿಸಲು ಮತ್ತು ಇಳಿಸಲು ಈ ಬಸ್ ನಿಲ್ದಾಣವನ್ನು ಬಳಸಿಕೊಳ್ಳಲು ಈ ಸಂದರ್ಭದಲ್ಲಿ ನಿರ್ಧರಿಸಲಾಯಿತು.

ರಸ್ತೆ ಬದಿಯ ಎಲ್ಲೆಂದರಲ್ಲಿ ಬಸ್‌ಗಳನ್ನು ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿ ಇಳಿಸುವುದನ್ನು ತಪ್ಪಿಸಲು ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣ ಮುಂಭಾಗದಲ್ಲಿ ಇರುವ ಖಾಲಿ ಜಾಗದಲ್ಲಿ ಬಸ್ ಬೇ ನಿರ್ಮಿಸಲು ನಿರ್ಧರಿಸಲಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಮೂಡುಬಿದಿರೆ ಪುರಸಭೆ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಖ್ಯಾಧಿಕಾರಿ ಇಂದು ಎಂ., ಇಂಜಿನಿಯರ್ ನಳಿನ್ ಕುಮಾರ್, ಸದಸ್ಯರಾದ ಸುರೇಶ್ ಕೋಟ್ಯಾನ್, ಪುರಂದರ ದೇವಾಡಿಗ ಇಕ್ಬಾಲ್ ಕರೀಂ, ಸಾರಿಗೆ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್, ಮೂಡುಬಿದಿರೆ ಎಸ್‌ಐ ನವೀನ್, ಗ್ಯಾರಂಟಿ ಯೋಜನೆಗಳ ಸದಸ್ಯರಾದ ಇಂಜಿನಿಯರ್ ಸತೀಶ್, ಶೌಕತ್ ಆಲಿ, ರಜನಿ ಹಾಗೂ ಪ್ರಮುಖರಾದ ರಾಜೇಶ್ ಕಡಲಕೆರೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಸ್ ಬೇ ನಿರ್ಮಾಣಕ್ಕೆ ಪುರಸಭೆಯಿಂದ ಈಸಂದರ್ಭದಲ್ಲಿ ಸರ್ವೇ ಕಾರ್ಯ ನಡೆಸಲಾಯಿತು.

LEAVE A REPLY

Please enter your comment!
Please enter your name here