ಕಾರ್ಕಳ : ಕಾಲು ಜಾರಿ ಬಿದ್ದು ಮೂಳೆ ಮುರಿತಕ್ಕೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮೇ 23ರಂದು ಶಿರ್ಲಾಲಿನಲ್ಲಿ ಸಂಭವಿಸಿದೆ. ಶೇಖರ (64) ಮೃತ ದುರ್ದೈವಿ. ಇವರು ಏ. 29 ಶಿರ್ಲಾಲು ಗ್ರಾಮದ ಹಾಡಿಯಂಗಡಿ ಕುಕ್ಕುಜೆ ಮನೆ ಬಳಿಯಿರುವ ಅಂಗಡಿಗೆ ಹಾಲು ತರಲು ಹೋಗಿದ್ದಾಗ ಕಾಲು ಜಾರಿ ಬಿದ್ದು ಬೆನ್ನು ಹುರಿಯ ಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರಕಾರಿ ಆಸ್ಪತ್ರೆ, ನಂತರ ಮಂಗಳೂರು ವೆನ್ಹಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೇ 23ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.