ಬೆಳ್ತಂಗಡಿ: ದನದ ಮೇವು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

0
239

ಬೆಳ್ತಂಗಡಿ: ಚಾರ್ಮಾಡಿಯಿಂದ ಉಜಿರೆ ಕಡೆಗೆ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಎಂಬಲ್ಲಿ ಇಂದು (ಮೇ.26) ಮುಂಜಾನೆ ನಡೆದಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here