ದ.ಕ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ ಅಧಿಕಾರ ಸ್ವೀಕಾರ: ನೈತಿಕ ಪೊಲೀಸ್ ಗಿರಿ,ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಎಂದ ನೂತನ ಎಸ್ಪಿ

0
157

ಮಂಗಳೂರು: ಸರ್ಕಾರ ಹಾಗೂ ಪ್ರಧಾನ ಕಚೇರಿಯ ಆದೇಶದಂತೆ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಅವರು ಅಧಿಕಾರ ಸ್ವೀಕರಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ. ನೈತಿಕ ಪೊಲೀಸ್‌ ಗಿರಿ(Moral Policing) ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿಗೆ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಡಾ. ಅರುಣ್. ಕೆ, ಐಪಿಎಸ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here