ಮುಲ್ಕಿ:ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

0
203

ಮುಲ್ಕಿ:ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದರೆ ಸಾಲದು ಅದರ ಜೊತೆ ಜೀವನದಲ್ಲೂ ಯಶಸ್ಸು ಗಳಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಮೂಲ್ಕಿ ಸೀಮೆ ಅರಮನೆ ಧರ್ಮ ಚಾವಡಿಯಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಗೌರವ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ಎಸ್‌.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಶೇಕಡಾ 95 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಈ ಸಂದರ್ಭ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಜೈನ್, ಕಟೀಲು ಕ್ಷೇತ್ರದ ಪ್ರಧಾನ ಅರ್ಚಕ ಹರಿನಾರಾಯಣ ಆಸ್ರಣ್ಣ, ಚಿತ್ರ ನಟ ಮಂಡ್ಯ ರಮೇಶ್‌, ಪ್ರಿಯದರ್ಶಿನಿ ಕೋ ಅಪರೇಟಿವ್‌ ಸೊಸೈ ಅಧ್ಯಕ್ಷ ವಸಂತ್ ಬೆರ್ನಾಡ್, ಡಾ ಕಾರ್ತಿಕ್ ರಾವ್, ಉದ್ಯಮಿ ಮರ್ಸಿ ವೀಣಾ ಡಿಸೋಜ, ಗೌತಮ್‌ ಜೈನ್‌ ಮತ್ತಿತರರು ಉಪಸ್ಥಿತರಿದ್ದರು.

ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ವಿನೋದ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ಮಹಿಮ್ ಹೆಗ್ಡೆ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here