ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ಪ್ರೇಮಿಗಳ ಅತಿರೇಕದ ವರ್ತನೆಯು ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಇತ್ತೀಚಿಗೆ ಒಂದು ಬಸ್ಸಿನಲ್ಲಿ ಪ್ರೇಮಿಗಳಿಬ್ಬರು ಯಾರ ಭಯವೂ ಇಲ್ಲದೆ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯಲ್ಲಿ, ಬಸ್ಸಿನ ಕೊನೆಯ ಸೀಟಿನಲ್ಲಿ ಕುಳಿತಿದ್ದ ಯುವಕ-ಯುವತಿ ಒಬ್ಬರನ್ನೊಬ್ಬರು ತಬ್ಬಿಕೊಂಡು, ಕಿಸ್ ಮಾಡುತ್ತಾ ರೊಮ್ಯಾನ್ಸ್ ಮಾಡಿದ್ದಾರೆ. ಈ ವರ್ತನೆಯನ್ನು ಕಂಡು ಸಾರ್ವಜನಿಕರು ಮತ್ತು ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.