ಮಲಿನಗೊಂಡ ನಂದಿನಿ ನದಿಯಲ್ಲಿ ಸ್ವಚ್ಛತೆ

0
14

ಸುರತ್ಕಲ್: ಇತಿಹಾಸ ಪ್ರಸಿದ್ದ ಚೇಳೈರು ಖಂಡಿಗೆ ನಂದಿನಿ ನದಿಗೆ ಮುಂಚೂರು ವೆಟ್ ವೆಲ್ ನ ಹತ್ತಿರದ ಒಳಚರಂಡಿಯ ಕೊಳಚೆ ನೀರು ಕೊಡಿಪಾಡಿಯಲ್ಲಿ ನಿರ್ಮಾಣವಾಗಿರುವ ತ್ಯಾಜ್ಯ ಸಂಸ್ಕರಣಾ ಘಟಕದ ನೀರು, ಚೊಕ್ಕಬೆಟ್ಟು ಪರಿಸರದ ಮನೆಯ ತ್ಯಾಜ್ಯ ನೀರು, ಖಾಸಗಿ ಅಸ್ಪತ್ರೆ, ಕಾಲೇಜು, ವಸತಿ ಗೃಹ ಮತ್ತು ಹೋಟೇಲ್ ಗಳ ತ್ಯಾಜ್ಯ ನೀರುಗಳನ್ನು ನಂದಿನಿ ನದಿಗೆ ಬೀಡುವುದರಿಂದ ನಂದಿನಿ ನದಿ ಸಂಪೂರ್ಣ ಕಲುಷಿತಗೊಂಡಿದೆ.
ಇದರಿಂದಾಗಿ ಚೇಳೈರು ಖಂಡಿಗೆ ಭಾಗದ ಅನೇಕ ಕೃಷಿಯನ್ನೆ ಅವಲಂಬಿತ ಕುಟುಂಬಗಳು ಕೃಷಿ ಮಾಡದ ಪರಿಸ್ಥಿತಿ ಎದುರಾಗಿದ್ದು , ಕುಡಿಯುವ ನೀರಿಗೂ ಸಮಸ್ಯೆಯಾಗಿದ್ದು ಬಾವಿಗಳು ಮಲೀನಗೊಂಡಿದೆ ಮಾತ್ರವಲ್ಲದೆ ಇತಿಹಾಸ ಪ್ರಸಿದ್ದ ಖಂಡಿಗೆ ದೈವಸ್ಥಾನದ ಮೀನು ಹಿಡಿಯುವ ವಿಶೇಷ ಜಾತ್ರೆ ನಿಲ್ಲುವ ಹಂತಕ್ಕೆ ತಲುಪಿದೆ ಜಾನುವಾರುಗಳಿಗೆ ನೀರು ಕುಡಿಯಲು ಮತ್ತು ಮೇವು ತಿನ್ನದ ಹೀನಾಯ ಪರಿಸ್ಥಿತಿ ಎದುರಾಗಿದ್ದು ಬಾವಿಯ ನೀರು ಕುಡಿದ ಅನೇಕ ಜನರು ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿದ್ದು ಖೇದಕರ ವಿಷಯವಾಗಿದೆ ಈ ಬಗ್ಗೆ ನಂದಿನಿ ನದಿ ಸಂರಕ್ಷಣಾ ಸಮಿತಿ ಖಂಡಿಗೆ ಚೇಳೈರು ಸೇರಿ ಜಿಲ್ಲಾಡಳಿತ ಮತ್ತು ಪರಿಸರ ಇಲಾಖೆಯ ವಿರುದ್ಧ ಬೃಹತ್ ಇತ್ತಿಚೆಗೆ ಪ್ರತಿಭಟನೆ ನಡೆಸಲಾಗಿತ್ತು ಆ ಸಂದರ್ಭದಲ್ಲಿ ಕೆ.ಪಿ,ಸಿ,ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಯವರು ಚೇಳೈರು ನಂದಿನಿ ನದಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಕರೆದುಕೊಂಡು ಬಂದು ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು.

ಅದೇ ರೀತಿ ಮಿಥುನ್ ರೈ,ಮಾಜಿ ಸಚಿವರಾದ ಅಭಯಚಂದ್ರಜ ಜೈನ್ ಸ್ಥಳೀಯ ಕಾಂಗ್ರೆಸ್ ನಾಯಕರ ಒತ್ತಡದ ಮೇರೆಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನದಿ ಕಲುಷಿತ ಪ್ರದೇಶಕ್ಕೆ ಬೇಟಿ ನೀಡಿದರು ಸಂಬಂಧಿಸಿದ ಎಲ್ಲಾ ಇಲಾಖೆಗಳ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಹಾಗೂ ಶಾಸಕರಾದ ಉಮಾನಾಥ ಕೋಟ್ಯಾನ್ ಸಚಿವರಲ್ಲಿ ಈ ಸಮಸ್ಯೆ ಬಹಳ ಅಗತ್ಯವಾದುದು ಇತಿಹಾಸ ಪ್ರಸಿದ್ಧ ದೈವಸ್ಥಾನದ ಪಾವಿತ್ರತೆಯ ವಿಷಯವಾಗಿದೆ ಇದಕ್ಕೆ ಶಾಶ್ವತ ಪರಿಹಾರ ಸರಕಾರದ ವತಿಯಿಂದ ಮಾಡಬೇಕಾಗಿ ವಿನಂತಿಸಿದರು. ಇದಕ್ಕೆ ಉತ್ತರಿಸಿದ ಸಚಿವರು ನಂದಿನಿ ನದಿ ಕಲುಷಿತ ಗೊಂಡಿರುವ ಸಮಸ್ಯೆ ಬಗ್ಗೆ ಈ ತಿಂಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂದಿಸಿದ ಎಲ್ಲಾ ಇಲಾಖೆಗಳ,ಹಾಗೂ ,ಎಂ,ಅರ್,ಪಿ,ಎಲ್ ಸಂಸ್ಥೆಯ ಅಧಿಕಾರಿಗಳ ವಿಶೇಷ ಸಭೆ ಕರೆದು ಸಮಸ್ಯೆಯನ್ನು ಪರಿಹಾರ ಮಾಡಿ ಕೊಡಲಾಗುವುದು ಎಂದರು ಮೂಲ್ಕಿ ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್, ಮಾಜಿ ಸಚಿವರಾದ ಅಭಯಚಂದ್ರ ಜೈನ್,ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅಪರ ಜಿಲ್ಲಾಧಿಕಾರಿ ಸಂತೋಷ್,ಮಂಗಳೂರು ಸಹಾಯಕ ಅಯುಕ್ತರಾದ ಹರ್ಷವರ್ದನ್,ಮಂಗಳೂರು ನಗರ ಪಾಲಿಕೆ ಅಯುಕ್ತರಾದ ರವಿಚಂದ್ರ ನಾಯಕ್,ಮಂಗಳೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ,ಮೂಲ್ಕಿ ತಹಶೀಲ್ದಾರರಾದ ಪ್ರದೀಪ್ ಕುರ್ಡೇಕರ್, ಉಪ ತಹಶೀಲ್ದಾರರಾದ ನವೀನ್ ಕುಮಾರ್,ಸುರತ್ಕಲ್ ಕಂದಾಯ ಅಧಿಕಾರಿ ಪ್ರಸಾದ್,ವಕೀಲರಾದ ವಿನಯರಾಜ್,ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಮೂಲ್ಕಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಸುಬ್ರಹ್ಮಣ್ಯ ಪ್ರಸಾದ್ ಕೋರ್ಯಾರು, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಕಿರಣ್ ಶೆಟ್ಟಿ ಕೆರೆಮನೆ ಚೇಳೈರು, ಚೇಳೈರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ, ಉಪಾಧ್ಯಕ್ಷೆ ರೇಖಾ,ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಡಿ, ಅಣ್ಣಪ್ಪ ಜಿ ಕುಂದರ್,ಸದಸ್ಯರಾದ ಸುಧಾಕರ ಶೆಟ್ಟಿ,ಲತಾ,ಸುಮನಾ ಭಟ್,ಸೂರಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ,ಕಾಂಗ್ರೆಸ್ ಮುಖಂಡರಾದ ವಸಂತಗ ಬೇರ್ನಾಡ್, ಅಬ್ದುಲ್ ರಜಾಕ್ ಸೂರಿಂಜೆ, ದಿನೇಶ್ ಪಂಡಿತ್, ಚೇಳೈರು ಗ್ರಾಮ ಅಡಳಿತ ಅಧಿಕಾರಿ ಸುಲೋಚನಾ,ಪಂಚಾಯತ್ ಅಭಿವೃದ್ದಿ ಅಧಿಕಾರಿ ನಿತ್ಯಾನಂದ,ನಂದಿನಿ ನದಿ ಸಂರಕ್ಷಣಾ ಸಮಿತಿಯ ಪ್ರಮುಖರಾದ ದಿವಾಕರ ಸಾಮಾನಿ,ಸುಕೇಶ್ ಶೆಟ್ಟಿ ಖಂಡಿಗೆ,ನಿತಿನ್ ಶೆಟ್ಟಿ ಖಂಡಿಗೆ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ, ಸೇವಾ ಪ್ರತಿನಿಧಿ ವಿದ್ಯಾ ಸ್ಥಳೀಯರಾದ ಗಂಗಾಧರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಉದಯವಾಣಿ ಪತ್ರಿಕೆಯಲ್ಲಿ ಇಂದು ಚೇಳೈರು ಮುಡಾ ನಿವೇಶನ ಸಮತಟ್ಟು ಎಡವಟ್ಟು ಪ್ರಕಟವಾಗಿದ್ದ ಬಗ್ಗೆ ಮಿಥುನ್ ರೈ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು ಸಚಿವರ ಗಮನಕ್ಕೆ ತಂದಾಗ ಇದರ ಬಗ್ಗೆ ಮೂಡಾದವರ ಸಭೆಯನ್ನು ಕರೆದು ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.

LEAVE A REPLY

Please enter your comment!
Please enter your name here