ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ 2025ರ ಟ್ರೋಫಿ ಗೆದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಒಟ್ಟು 11 ಮಂದಿ ಜೀವ ಕಳೆದುಕೊಂಡಿದ್ದಾರೆ. ಅದರಲ್ಲಿ ಮಂಗಳೂರು ತಾಲೂಕಿನ ಮುಲ್ಕಿಯ ಸಿಎ ಅಕ್ಷತಾ ಪೈ ಎಂಬವರು ಕೂಡ ಮೃತ ಪಟ್ಟಿದ್ದಾರೆ.
ಇವರು ಬೆಂಗಳೂರಿನಲ್ಲಿ ಸಿ ಎ ವೃತ್ತಿ ನಿರ್ವಹಿಸುತ್ತಿದ್ದು, ವೆಂಕಟರಮಣ ದೇವಸ್ಥಾನದ ಮುಲ್ಕಿ ಎದುರಡೆ ಇವರ ಮನೆಯಿದೆ. ಬೆಂಗಳೂರಿನಲ್ಲಿ ಆರ್ ಸಿ ಬಿಯ ವಿಜಯೋತ್ಸವಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮನೆ ಮಗಳನ್ನು ಕಳೆದುಕೊಂಡ ಮನೆಯವರ ಅಕ್ರಂದನ ಮುಗಿಲು ಮುಟ್ಟಿದೆ.