ಇಳಂತಿಲದ ಯುವತಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತ್ಯು

0
589

ಉಪ್ಪಿನಂಗಡಿ: ಆರ್‌ ಸಿ ಬಿ(RCB) ತಂಡ ಮೊದಲ ಬಾರಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಉಪ್ಪಿನಂಗಡಿಯ ಇಳಂತಿಲ ಮೂಲದ ಯುವತಿ ಚಿನ್ಮಯಿ ಶೆಟ್ಟಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಇಳಂತಿಲ ಅಂಡೆತ್ತಡ್ಕ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ಮಯಿ ಶೆಟ್ಟಿ(20) ಮೃತಪಟ್ಟವರು. ಇವರು ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದರು.

LEAVE A REPLY

Please enter your comment!
Please enter your name here