ಕುಂದಾಪುರ: ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಮುಸ್ಲಿಂ ಮಹಿಳೆಯಿಂದ ಹಲ್ಲೆ

0
617

ಕುಂದಾಪುರ: ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಮುಸ್ಲಿಂ ಮಹಿಳೆ ಹಲ್ಲೆ ಮಾಡಿರುವ ಘಟನೆ ಗುಲ್ಲಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ನಲ್ಲಿ ನಡೆದಿದೆ.

ಲಕ್ಷ್ಮೀ ಹಲ್ಲೆಗೊಳಗಾದ ಯುವತಿ. ಯಾಸ್ಮಿನ್ ಹಲ್ಲೆಗೈದ ಮಹಿಳೆ. ಮಾವಿನಕಟ್ಟೆಯ ಮೆಡಿಕಲ್‌ ಬಂದಿದ್ದ ಆ ಮಹಿಳೆ ಔಷಧ ಖರೀದಿಸಿ 500 ರೂ. ಕೊಟ್ಟಿದ್ದಾಳೆ. ಆಗ ಚಿಲ್ಲರೆ ಇಲ್ಲ, ಕೊಡಿ ಎಂದ ಯುವತಿ ಹೇಳಿದ್ದಾಳೆ. ಆದರೆ ಯಾಸ್ಮಿನ್ ಅದೇ ವಿಚಾರಕ್ಕೆ ಯುವತಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎನ್ನಲಾಗಿದೆ.

ಹಲ್ಲೆಗೊಳಗಾದ ಲಕ್ಷ್ಮಿ ಅವರನ್ನು ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಘಟನೆ ನಡೆದ ಔಷಧ ಅಂಗಡಿಗೂ ಭೇಟಿ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಘಟನೆ ಕುರಿತಂತೆ ಕುಂದಾಪುರ ಗ್ರಾಮಾಂತರ ಠಾಣೆ ಯಲ್ಲಿ ಕೇಸು ದಾಖಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here