ಸರಕಾರಿ ಶಾಲೆಗಳ ಉಳಿವಿಕೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಪ್ರಮುಖ ಪಾತ್ರ ವಹಿಸುತ್ತದೆ- ಸುನಿಲ್ ಕುಮಾರ್

0
282

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ಸರಕಾರಿ ಉಳಿಯಬೇಕಾದರೆ ಪ್ರತಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಹಾಗೂ ಯುಕೆಜಿ ) ತರಗತಿಗಳನ್ನು ಆರಂಭಿಸಿ ಕನ್ನಡ ಭಾಷೆಯೊಂದಿಗೆ ಇಂಗ್ಲಿಷ್ ಮಾಧ್ಯಮ ತರಗತಿಗಳು ಆರಂಭವಾಗಬೇಕು ಎಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಹೇಳಿದರು

ಅವರು ಮಂಗಳವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ವಹಿಸಿದ್ದರು.

1 ನೇ ತರಗತಿಯಿಂದ 7ನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕವನ್ನು ಒದಗಿಸಿ ಪುಸ್ತಕ ವಿತರಣೆ ಮಾಡಿ ಮಾತನಾಡಿದ ಉದ್ಯಮಿ ಶಾಲಾ ಹಿರಿಯ ವಿದ್ಯಾರ್ಥಿ ಸಂಶುದ್ದೀನ್ ಪಟ್ಲ, ಮಾತನಾಡಿ ಶಾಲೆಗೆ ತುರ್ತು ಅಗತ್ಯವಿರುವ ಅಕ್ಷರ ದಾಸೋಹ ಕೊಠಡಿಯ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಬರವಸೆ ನೀಡಿದರು. ಶಾಲೆಗೆ ಒಂದನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಶಾಲಾ ಸಮಸ್ತವನ್ನು. ಮಾಜಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೇಶವ ಕೆ ಉಚಿತವಾಗಿ ನೀಡಿ ಪ್ರೋತ್ಸಾಹಿಸಿದರು.

ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ ಬನಾರಿ ಸರಕಾರದಿಂದ ಸಿಗುವ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಿ ಮಾತನಾಡಿ ಎಲ್ಲರ ಸಹಕಾರ ಪಡೆದು ಶೀಘ್ರವೇ ಅಕ್ಷರ ದಾಸೋಹ ಕೊಠಡಿಯನ್ನು ನಿರ್ಮಿಸಲಾಗುವುದು ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕ್ಯಾಶೂ ಇಂಡಸ್ಟ್ರೀಸ್ ಶೇರಾ ಮಾಲಕರಾದ ಗಂಗಾಧರ ಶೇರಾ, ಶಾಲಾ ಮಾಜಿ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಚೆನ್ನಪ್ಪ ಅಂಚನ್,ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷರಾದ ಚಿದಾನಂದ, ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷರಾದ ಉಷಾ, ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು,
ಅಂಗನವಾಡಿ ಶಿಕ್ಷಕಿ ಪುಷ್ಪಾ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಪಿ ಸ್ವಾಗತಿಸಿ
ಸಹ ಶಿಕ್ಷಕ ಗೋಪಾಲಗೌಡ, ವಂದಿಸಿದರು. ಸಹ ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿಯರಾದ ಅನಿತಾ ಕುಮಾರಿ ಮತ್ತು ಸುಮಲತಾ ಸಹಕರಿಸಿದರು.

LEAVE A REPLY

Please enter your comment!
Please enter your name here