ಪೆಟ್ರೋಲ್ ಬಂಕ್‌ಗಳ ಮಾಲೀಕರ ಗಮನಕ್ಕೆ

0
614

ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಶೌಚಾಲಯಗಳು ಸ್ವಚ್ಛವಾಗಿರಿಸದೇ ಇರುವ ಬಗ್ಗೆ ಹಾಗೂ ಶೌಚಾಲಯಗಳು ಸುಸ್ಥಿತಿಯಲ್ಲಿ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆ, ಎಲ್ಲಾ ಪೆಟ್ರೋಲ್ ಬಂಕ್ ಮಾಲೀಕರುಗಳು ಶೌಚಾಲಯಗಳು ಸ್ವಚ್ಛವಾಗಿರುವಂತೆ ಮತ್ತು ಸ್ಯಾನಿಟೈಸರ್, ಟಾಯ್ಲೆಟ್ ಪೇಪರ್ ಮತ್ತು ಇತರೆ ಅಗತ್ಯ ವಸ್ತುಗಳ ಲಭ್ಯವಿರುವಂತೆ ನೋಡಿಕೊಳ್ಳಬೇಕು.

ಶೌಚಾಲಯಗಳು ಸುಸಜ್ಜಿತವಾದ ನೀರಿನ ಸಂಪರ್ಕ ಹೊಂದಿರಬೇಕು. ಪೆಟ್ರೊಲ್ ಬಂಕ್‌ಗೆ ಬರುವ ಗ್ರಾಹಕರಿಗೆ ಮುಕ್ತ ಪ್ರವೇಶ ಕಲ್ಪಿಸಬೇಕು ಹಾಗೂ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾದ ಶೌಚಾಲಯದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here