ಬಜಪೆ: ಬಜಪೆ ಡಾ ಜಯರಾಮ ಶೆಟ್ಟಿ (76) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಡಾ. ಜಯರಾಮ್ ಶೆಟ್ಟಿಯವರು 1972ರಿಂದ ಸುಧೀರ್ಘ ಕಾಲ ವ್ಯೆದ್ಯಾರಾಗಿ ಮಕ್ಕಳ ತಜ್ಞರಾಗಿ ಸೇವೆ ಸಲ್ಲಿಸಿರುತಾರೆ. ವೈದ್ಯಕೀಯ ಸೇವೆಯೊಂದಿಗೆ ಸಾರ್ವಜನಿಕವಾಗಿ ಪೋರ್ಕೊಡಿ ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ, ಎರಡು ಬ್ರಹ್ಮಕಲಸಗಳನ್ನು ನೆರವೇರಿಸಿರುತಾರೆ. ಇವರು ನಿಂಜೂರು ಕೊಡಮಂತಾಯ ದೈವಸ್ಥಾನದ ಆಡಳಿತ ಮೊಕ್ತೆಸರರೂ ಆಗಿರುತಾರೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ವೈದ್ಯಕೀಯ ಸಲಹೆಗಾರರಾಗಿ ಸೇವೆ ಸಲ್ಲಿಸಿರುತಾರೆ. ಲಯನ್ಸ್ ಕ್ಲಬ್ ನ ಜಿಲ್ಲಾ ಗವರ್ನರ್ ಆಗಿಯೂ ಸೇವೆ ಸಲ್ಲಿಸಿರುತಾರೆ. ಅಲ್ಲದೆ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಳ್ಳುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ