ಮೂಡಬಿದರೆ ತಾಲೂಕಿನ ದರೆಗುಡ್ಡೆ ಗ್ರಾಮದ ಅಯೋಧ್ಯ ನಗರ ಎಂಬಲ್ಲಿ ಇಂದು(ಜೂ.18) ಗೋವಿನ ಕಾಲು ಕಡಿದ ಪ್ರಕರಣ ನಡೆದಿದ್ದು,ಅತ್ಯಂತ ಕ್ರೂರ ಮತ್ತು ಹೇಯ ಕೃತ್ಯವಾಗಿದೆ ಹಾಗೂ ತೀವ್ರವಾಗಿ ಖಂಡಿಸುತ್ತೇವೆ ಎಂದು ಹಿಂದು ಜಾಗರಣ ವೇದಿಕೆ ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ ತಿಳಿಸಿದ್ದಾರೆ. ಇದಕ್ಕಿಂತ ಮೊದಲು ಈ ಪ್ರದೇಶದಲ್ಲಿ ಇಂತಹ ಘಟನೆ ನಡೆದಿದ್ದು ಘಟನೆ ಬಗ್ಗೆ ಈ ಬಾರಿ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಜರುಗಿಸದೆ ಹೋದರೆ ಮುಂದಿನ ದಿನಗಳಲ್ಲಿ ಪೊಲೀಸ್ ಠಾಣೆ ಎದುರುಗಡೆ ಹಿಂದೂ ಸಮಾಜ ಬಾಂಧವರನ್ನು ಸೇರಿಸಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ, ಆದುದರಿಂದ ಸಂಬಂಧಪಟ್ಟ ಇಲಾಖೆ ಈ ಘಟನೆಗೆ ಕಾರಣಿಕರ್ತರಾದವರನ್ನು ಕೂಡಲೇ ಬಂಧಿಸಿ ಕಠಿಣ ಸೆಕ್ಷನ್ ಅಡಿಯಲ್ಲಿ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಈ ಮೂಲಕ ಆಗ್ರಹಿಸಿದ್ದಾರೆ.
Home ಮೂಡುಬಿದಿರೆ ದನದ ಕಾಲು ಕಡಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಇಲ್ಲವಾದಲ್ಲಿ ಠಾಣೆ ಮುತ್ತಿಗೆ...