ಬಂಟ್ವಾಳ : ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು

0
986

ಬಂಟ್ವಾಳ : ಪತ್ನಿಯನ್ನು ಕೊಂದು ಪತಿ ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ನಡೆದಿದೆ.

ತಿಮ್ಮಪ್ಪ ಮೂಲ್ಯ (50) ಅವರು ತಮ್ಮ ಪತ್ನಿ ಜಯಂತಿ (40) ಅವರನ್ನು ಕೊಲೆ ಮಾಡಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಯಂತಿ ಅವರು ಗರ್ಭಿಣಿಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು.

ಆದರೆ ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here