ಬೈಂದೂರು: ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ

0
146

ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ರೋಟರಿ ಭವನ ಬೈಂದೂರಿನಲ್ಲಿ ನಡೆಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೀಪ ಬೆಳಗಿದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ‌ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನ ಲ್ಲಿ‌ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ಮತ್ತು ಕ್ಷೇತ್ರದ ಅಭಿವೃದ್ಧಿ ಗೆ ಎಲ್ಲರೂ ಕೈಜೋಡಿಸೋಣ ಹಾಗೂ ಬೈಂದೂರು ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಮಾಜಿ ಶಾಸಕ ಗೋಪಾಲ್ ಪೂಜಾರಿ ಇಬ್ಬರು ಕ್ಷೇತ್ರದ‌ ದೃಷ್ಟಿಯಿಂದ ಯಾವುದೇ ರಾಜಕೀಯ ಇಲ್ಲದೆ, ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ರಾಜಕಾರಣಿಗಳಿಗೆ ಬೇಕಿರುವ ಬದ್ಧತೆ ಎಂದರು.

ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಮಹಿಳೆಯರಿಗೆ ಸ್ವಾಭಿಮಾನದ ಬದುಕು ಸಾಗಿಸಲು ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕುಂದಾಪುರ ತಹಶಿಲ್ದಾರ್ ಪ್ರದೀಪ್ ಕುರುಡೇಕರ್, ಬೈಂದೂರು ತಹಶೀಲ್ದಾರ್ ಎಚ್. ರಾಮಚಂದ್ರಪ್ಪ, ಬೈಂದೂರು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಅಜೇಯ ಭಂಡಾರ್‌ಕಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು, ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕಾರ್ಕಳ, ಸದಸ್ಯರಾದ ಅರವಿಂದ ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಪ.ಪಂ ನಾಮನಿರ್ದೇಶಿತ ಸದಸ್ಯರಾದ ಸದಾಶಿವ ಡಿ. ಪಡುವರಿ, ನಾಗರಾಜ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here