ಅಂಗನವಾಡಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ

0
74

ಬೆಳಗಾವಿ ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊನೆಗೆ ಓರ್ವನ ಕೊಲೆಯಲ್ಲಿ  ಅಂತ್ಯವಾಗಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ  ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಯಾಸೀರ್ ಜಾತಗಾರ(24) ಕೊಲೆಯಾದ ಯುವಕ. ಯಾಸೀರ್ ಕೊಲೆಗೈದು ರೋಹಿತ್ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಎಸ್​ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಬಳಿಕ ಚಾಕುವಿನಿಂದ ಇರಿದು ಯಾಸೀರ್​ನನ್ನ ರೋಹಿತ್ ಕೊಲೆ ಮಾಡಿದ್ದಾನೆ. ಸುಮಾರು ಹತ್ತು ಜನರಿಂದ ಕೊಲೆ‌ ಮಾಡಿರುವ ಆರೋಪ ಕೇಳಿಬಂದಿದ್ದು, ಮೃತನ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

LEAVE A REPLY

Please enter your comment!
Please enter your name here