ಬಂದಾರು : ಬಂದಾರು ಮತ್ತು ಮೊಗ್ರು ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ತಾಲೂಕು ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷರು ವಕೀಲರಾದ ಉದಯ ಬಿ ಕೆ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಮುಗೇರಡ್ಕ ಬಾಲಕೃಷ್ಣ ಗೌಡ ಸಂದರ್ಭಯೋಚಿತವಾಗಿ ಮಾತನಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹಾಗೂ ಬಿಜೆಪಿ ಪಕ್ಷದ ಪ್ರಮುಖರು, ಸಿ ಎ ಬ್ಯಾಂಕ್ ಹಾಗೂ ಹಾಲು ಉತ್ಪಾದಕರ ಸಂಘದ ನಿರ್ದೇಶಕರು,ಹಾಗೂ ನಾಗರಿಕರು ಉಪಸ್ಥಿತರಿದ್ದರು.\ಬಂದಾರು : ಬಂದಾರು ಮತ್ತು ಮೊಗ್ರು ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ತಾಲೂಕು ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷರು ವಕೀಲರಾದ ಉದಯ ಬಿ ಕೆ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಮುಗೇರಡ್ಕ ಬಾಲಕೃಷ್ಣ ಗೌಡ ಸಂದರ್ಭಯೋಚಿತವಾಗಿ ಮಾತನಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹಾಗೂ ಬಿಜೆಪಿ ಪಕ್ಷದ ಪ್ರಮುಖರು, ಸಿ ಎ ಬ್ಯಾಂಕ್ ಹಾಗೂ ಹಾಲು ಉತ್ಪಾದಕರ ಸಂಘದ ನಿರ್ದೇಶಕರು,ಹಾಗೂ ನಾಗರಿಕರು ಉಪಸ್ಥಿತರಿದ್ದರು.