ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನಾ ಸಭೆ

0
74

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದಾಗಿ ಗ್ರಾಮ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಭಾರತಿಯ ಜನತಾ ಪಾರ್ಟಿಯು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಏಕ ಕಾಲದಲ್ಲಿ ಪ್ರತಿಭಟನೆಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ಸಾರ್ವಜನಿಕರ ಪರವಾಗಿ ಜೂ 23 ರಂದು ಪ್ರತಿಭಟನಾ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ನೀತಿಗಳಿಂದ ಜನ ಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಿರಿಯ ಕಾರ್ಯಕರ್ತರಾದ ವಸಂತ ಗೌಡ ಕಲ್ಲಾಜೆ ಹಾಗೂ ನಿಕಟಪೂರ್ವ ಪಂಚಾಯತ್ ಅಧ್ಯಕ್ಷರಾದ ಆನಂದ ಅಡಿಲು ರವರು ಸವಿವರವಾಗಿ ಸಭೆಗೆ ಮಾಹಿತಿ ನೀಡಿದರು.

ಜನ ಸಾಮಾನ್ಯರ ಪರವಾಗಿ ವಿ.ಜೆ ದೇವಸಿ ಎರ್ಮಲ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 9/11 ನಿವೇಶನಗಳ ಸಮಸ್ಯೆಗಳ ಬಗ್ಗೆ, ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸಿರುವುದರ ಬಗ್ಗೆ, ಬಡವರ ಅಶ್ರಯ ಮನೆಗಳ ಯೋಜನೆ ಬಿಡುಗಡೆ ಆಗದಿರುವ ಬಗ್ಗೆ, ವೃದ್ಯಾಪ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ಮನೆ ಕಟ್ಟಲು ಕೆಂಪು ಕಲ್ಲು, ಮರಳು, ಜಲ್ಲಿ ಕಲ್ಲು ಸಿಗದೇ ಇರುವುದರ ಬಗ್ಗೆ, ಗ್ರಾಮ ಪಂಚಾಯತ್ ಕಚ್ಚ (ಮಣ್ಣಿನ) ರಸ್ತೆಗಳಿಗೆ ತುರ್ತು ದುರಸ್ತಿ ಕಾರ್ಯ ಮಾಡಲು ಚರಲ್ ಹಾಕಲು ಅನುಮತಿ ಇಲ್ಲದೆ ಇರುವುದರ ಬಗ್ಗೆ. ದಿನದಿಂದ ದಿನಕ್ಕೆ ಗ್ಯಾರಂಟಿ ಹೆಸರಿನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡದೆ ಇರುವುದರ ಬಗ್ಗೆ ಇನ್ನಿತರ ಜನ ವಿರೋಧಿ ನೀತಿಯನ್ನು ಖಂಡಿಸಿ ನೂರಾರು ಮಂದಿ ಗ್ರಾಮಸ್ಥರ ಉಪಸ್ಥಿತಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ, ಸದಸ್ಯರಾದ ಪ್ರಮೋದ್ ಕುಮಾರ್, ಸತೀಶ್ ಗೌಡ ಚೌಕ್ಕದಕಟ್ಟೆ, ಸುಮಿತ್ರಾ, ಹರಿಣಾಕ್ಷಿ, ಸೌಮ್ಯಾ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕರಾದ ರಮೇಶ್ ಕೆಂಗಾಜೆ, ಪುಷ್ಪಲತಾ, ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷರಾದ ವಾಮನ ಗೌಡ, ಬೆದ್ರಬೆಟ್ಟು ಹಾಲಿನ ಸೋಸೈಟಿ ಅಧ್ಯಕ್ಷ ಚಂದ್ರಶೇಖರ ಕಾಂಜಾನು ಹಾಗೂ ನಿರ್ದೇಶಕರು, ಇಂದಬೆಟ್ಟು ಹಾಲಿನ ಸೋಸೈಟಿ ನಿರ್ದೇಶಕರಾದ ಶ್ರೀಮತಿ ಪ್ರೇಮಾ ವಿದ್ಯಾನಂದ ಗುಡಿಗಾರ್, ಬೂತ್ ಸಮಿತಿ ಅಧ್ಯಕ್ಷರಾದ ಶಶಿಧರ ಗೌಡ ಪಡೆಂಕ್ಕಲ್, ಸಂಜೀವ ಗೌಡ ದರ್ಖಸು, ನಿತೇಶ್ ಕಡಿತ್ಯಾರು, ನವೀನ್ ಜೈನ್, ಕಾರ್ಯದರ್ಶಿಗಳಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು, ಪ್ರತೀಶ್ ಕಡಿತ್ಯಾರು, ತಾಲೂಕು ರೈತ ಮೋರ್ಚಾ ಉಪಾಧ್ಯಕ್ಷ ಪಳನಿ ಸ್ವಾಮಿ, ಯುವ ಮೋರ್ಚಾ ಸಂಚಾಲಕರಾದ ಚಂದ್ರಶೇಖರ ಪಡೆಂಕ್ಕಲ್, ಸುರಪ್ಪ ಅಂತರದಡ್ಡು, ಪಕ್ಷದ ಹಿರಿಯ ಹಾಗೂ ಕಿರಿಯ ಕಾರ್ಯಕರ್ತರು, ಇಂದಬೆಟ್ಟು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಿದರು. ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀಕಾಂತ್ ಎಸ್ ಇಂದಬೆಟ್ಟು ರವರು ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here