ವೇಣೂರು: ಸರ್ಕಾರಿ ಪದವಿಪೂರ್ವ ಕಾಲೇಜು ವೇಣೂರು ಇಲ್ಲಿ 2025-26 ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯು Electronic Voting Machine (EVM) ಮಾದರಿಯಲ್ಲಿ ಮೊಬೈಲ್ ಆಪ್ ಮೂಲಕ ನಡೆಸಲಾಯಿತು.
ಇವಿಎಂ ಮತಯಂತ್ರದಲ್ಲಿ ಮತ ಚಲಾಯಿಸುವ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಇವಿಎಂ ಮತಯಂತ್ರದ ಮೂಲಕ ಮತದಾನ ಮಾಡುವ ವಿನೂತನ ಪ್ರಯೋಗ ನಡೆಯಿತು.
ಇಂದು ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳು ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಆದರೆ ವೇಣೂರು ಸರಕಾರಿ ಪಪೂ ಕಾಲೇಜಿನಲ್ಲಿ ಪ್ರಾಂಶುಪಾಲರ ಮಾರ್ಗದರ್ಶನದಲ್ಲಿ ಉಪನ್ಯಾಸಕರುಗಳ ಶ್ರಮದಲ್ಲಿ ಅತ್ಯಂತ ಶಿಸ್ತುಬದ್ಧವಾದ ವಿದ್ಯಾರ್ಥಿ ಸಂಘವನ್ನು ರಚಿಸಿ ಪಾರ್ಲಿಮೆಂಟ್ ಮಾದರಿಯಲ್ಲಿ ಆಡಳಿತ ನಡೆಸುವ ಮಾದರಿಯನ್ನು ಅನುಸರಿಸಿಕೊಂಡು ಬಂದಿದ್ದು ಆ ಪರಂಪರೆ ಈಗಲೂ ಮುಂದುವರೆದಿದೆ.
ಚುನಾವಣೆಯಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ನಿರೀಕ್ಷಾ ಎನ್ ಪೂಜಾರಿ ಅಧ್ಯಕ್ಷೆಯಾಗಿ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ಸಾಹಿತ್ ಎಸ್ ಶೆಟ್ಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.