ಬೆಂಗಳೂರು: ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಆ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಅಣ್ಣಾಮಲೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಹುದ್ದೆ ಸಿಗಲಿದೆ ಎಂದು ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳಲ್ಲಿ ಅಣ್ಣಾಮಲೈ ಅವರನ್ನು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕೆ.ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ರಂಗವನ್ನು ಪ್ರವೇಶಿಸಿದರು. ರಾಷ್ಟ್ರೀಯತೆಯ ವಿಚಾರದಲ್ಲಿ ರಾಜಕೀಯ ಜೀವನ ಆರಂಭಸಿದ ಅಣ್ಣಾಮಲೈ ತಮಿಳುನಾಡು ಬಿಜೆಪಿಯಲ್ಲಿ ಹೊಸ ಕ್ರಾಂತಿಯನ್ನು ಮಾಡಿದರು. ಬಿಜೆಪಿ ತಮಿಳುನಾಡಿನಲ್ಲಿ ಯಾವುದೇ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗದಿದ್ದರು ತನ್ನ ಮತ ಗಳಿಕೆಯಲ್ಲಿ ಭಾರೀ ಪ್ರಮಾಣದ ಬದಲಾವಣೆಗಳಾಗಿತ್ತು. ಅದರೆ ಎಐಡಿಎಂಕೆ ಜೊತೆಗಿನ ಮೈತ್ರಿಯ ಕಾರಣಕ್ಕೆ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಆ ಸಂಧರ್ಭದಲ್ಲಿಯೇ ಅಣ್ಣಾಮಲೈ ಅವರಿಗೆ ರಾಷ್ಟ್ರೀಯ ಹುದ್ದೆ ನೀಡುವ ಎಲ್ಲಾ ಮುನ್ಸೂಚನೆಗಳನ್ನು ನೀಡಿದ್ದರು ಸದ್ಯ ಈಗ ಆ ಹುದ್ದೆ ದೊರೆತಿದ್ದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಮೂಲಕ ಜವಾಬ್ದಾರಿಯುತ ಸ್ಥಾನವನ್ನು ನೀಡಲಾಗಿದೆ