ಹೈದರಾಬಾದ್: ಹೈದರಾಬಾದ್ನ ಪತಂಚೇರುವಿನ ಪಾಶಮೈಲಾರಂನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಭಾರಿ ಸ್ಫೋಟ ಕಾಣಿಸಿಕೊಂಡಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಗಾಯಗೊಂಡ ಹಲವಾರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದಾರೆ. ಸ್ಫೋಟಗೊಂಡ ಬಳಿಕ ಕಾರ್ಮಿಕರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.