ರಾಯಚೂರು: ಗೋವು ರಕ್ಷಣೆ ಮಾಡಿದ್ದ ಐವರು ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಘಟನೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಪ್ರಕರಣ ನಡೆದ 24 ಗಂಟೆಗಳಲ್ಲೇ ಮತ್ತೊಂದು ಇದೇ ರೀತಿಯ ಘಟನೆ ರಾಯಚೂರಿನಲ್ಲಿ ನಡೆದಿದೆ. ಗೋ ರಕ್ಷಣೆಗೆ ಹೋಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ಅನ್ಯ ಕೋಮಿನ ಯುವಕರ ಗುಂಪು ಹಲ್ಲೆ ನಡೆಸಿರುವ ಹಲ್ಲೆ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲೆ ಸಿಂಧನೂರು ನಗರದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗಾಯಳುಗಳು ತಾಲೂಕ ಆಸ್ಪತ್ರಯಲ್ಲಿ ಚಿಕಿತ್ಸೆ ಪಡೆದುಯುತ್ತಿದ್ದಾರೆ.
ಮನೋಹರ್ ಹಿರೇಮಠ, ಶಿವರಾಜ್ ಎಸ್ ಆರ್ ಕೆ, ನಾಗೇಶ್ ಪವಾರ್, ವೀರಭದ್ರ, ಅನಿಲ್ ಕುಮಾರ್ ಗೊರಬಾಳ, ವೀರೇಶ್ ನಾಯಕ. ಹನುಮೇಶ್ ಎನ್ನುವರು ಗಾಯಗೊಂಡಿದ್ದು, ಸದ್ಯ ಸಿಂಧನೂರು ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ವಿಚಾರ ತಿಳಿದು ಆಸ್ಪತ್ರೆಗೆ ಮುಖಂಡರುಗಳು ಭೇಟಿ ನೀಡಿ ಘಟನೆ ಬಗ್ಗೆ ವಿಚಾರಿಸಿದ್ದು, ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಶ್ರೀರಾಮ ಸೇನೆ
ಪಟ್ಟಣದ ನ್ಯಾಷನಲ್ ಲೇಔಟ್ ಬಳಿ ಗೋ ಸಾಗಾಟಕ್ಕೆ ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅನ್ಯ ಕೋಮಿನ ಯುವಕ ಗುಂಪು, ಗೋ ರಕ್ಷಣೆಗಿಳಿದಿದ್ದವರ ಜೊತೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ವೇಳೆ ಘಟನೆಯಲ್ಲಿ 8 ಜನ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಸದ್ಯ ಗಾಯಗೊಂಡ ಕಾರ್ಯಕರ್ತರಿಗೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಸಿಂಧನೂರು ಟೌನ್ ಪೊಲೀಸರ ಭೇಟಿ ಗಾಯಾಳಗಳ ಹೇಳಿಕೆ ಪಡೆದುಕೊಂಡು ತನಿಖೆ ಕೈಗೊಂಡಿದ್ದಾರೆ.