ಹೆಬ್ರಿಯಲ್ಲಿ ಗೋಪಾಲ ಭಂಡಾರಿ ಅವರ ಪುತ್ಥಳಿ ಲೋಕಾರ್ಪಣೆ : ಸಂಸ್ಮರಣ ಗ್ರಂಥ ಬಿಡುಗಡೆ

0
21

ಡಾ.ಎಂ ವೀರಪ್ಪ ಮೊಯ್ಲಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಶಾಸಕ ಸುನಿಲ್ ಕುಮಾರ್‌ ಸಹಿತ ವಿವಿಧ ಗಣ್ಯರು ಭಾಗಿ.

ಹೆಬ್ರಿ : ಅಜಾತಶತ್ರು ಜನನಾಯಕ ಅಭಿವೃದ್ಧಿಯ ಹರಿಕಾರರಾಗಿದ್ದ ಹೆಬ್ರಿ ಗೋಪಾಲ ಭಂಡಾರಿಯವರು ಕಾರ್ಕಳ ಕ್ಷೇತ್ರದ ಶಾಸಕರಾಗಿ ಜನಸೇವೆ ಮಾಡಿ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ೫೦ ವರ್ಷಗಳ ಕಾಲ ನಿರಂತರವಾಗಿ ಸೇವೆ ಮಾಡಿದ ಗೋಪಾಲ ಭಂಡಾರಿಯವರು ಎಲ್ಲರಿಗೂ ಮಾದರಿ, ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಹೆಬ್ರಿ ಕಾರ್ಕಳ ಇದರ ವತಿಯಿಂದ ಹೆಬ್ರಿ ಕಾರ್ಕಳ ರಾಜ್ಯ ಹೆದ್ದಾರಿಯ ಬಚ್ಚಪ್ಪು ತಿರುವಿನಲ್ಲಿ ವೃತ್ತ ಮತ್ತು ಅವರ ಪುತ್ಥಳಿಯನ್ನು ಸ್ಥಾಪನೆ ಮಾಡಲಾಗಿದ್ದು ಇದೇ ೦೭ ರಂದು ೩ ಗಂಟೆಗೆ ಲೋಕಾರ್ಪಣೆಯಾಗಲಿದೆ. ಬಳಿಕ ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಕ ಮಾತಿಬೆಟ್ಟು ಪ್ರಕಾಶ ಪೂಜಾರಿ ಅವರ ಸಂಪಾದಕತ್ವದಲ್ಲಿ ಹೊರತಂದ ಗೋಪಾಲ ಭಂಡಾರಿಯವರ ಸಂಸ್ಮರಣಾ ಗ್ರಂಥ ಬಿಡುಗಡೆ ನಡೆಯಲಿದೆ ಎಂದು ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ತಿಳಿಸಿದರು.
ಅವರು ಬುಧವಾರ ಹೆಬ್ರಿಯ ಚೈತನ್ಯ ಯುವವೃಂದದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗೋಪಾಲ ಭಂಡಾರಿಯವರನ್ನು ಕಳೆದುಕೊಂಡು ನೋವು ನಿತ್ಯವೂ ಕಾಡುತ್ತಿದೆ. ಅವರ ನೆನಪನ್ನು ಶಾಶ್ವತವಾಗಿ ಮಾಡುವುದು ನಮ್ಮೇಲ್ಲರ ಕರ್ತವ್ಯವಾಗಿದೆ. ಅವರ ಆದರ್ಶ ಮಾರ್ಗದರ್ಶನ ನಮ್ಮನ್ನು ಬೆಳೆಸಿದೆ ಎಂದು ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಡಾ. ಎಂ.ವೀರಪ್ಪ ಮೊಯಿಲಿ ಗೋಪಾಲ ಭಂಡಾರಿ ಅವರ ವೃತ್ತ ಮತ್ತು ಪುತ್ಥಳಿ ಲೋಕಾರ್ಪಣೆ ಮಾಡುವರು. ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಸಂಸ್ಮರಣ ಗ್ರಂಥ ಬಿಡುಗಡೆ ಮಾಡುವರು. ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸುವರು. ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕಾರ್ಕಳ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸುವರು.
ವಿಧಾನಪರಿಷತ್‌ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್‌ ಡಿಸೋಜ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಮಾಜಿ ಸಚಿವರಾದ ರಮಾನಾಥ ರೈ, ಜಯಪ್ರಕಾಶ ಹೆಗ್ಡೆ, ವಿನಯ ಕುಮಾರ್‌ ಸೊರಕೆ, ಅಭಯಚಂದ್ರ ಜೈನ್‌, ಕಿಮ್ಮನೆ ರತ್ನಾಕರ್‌, ಮಾಜಿ ಶಾಸಕ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ ಪತ್ನಿ ಪ್ರಕಾಶಿನಿ ಭಂಡಾರಿ, ಧರ್ಮಸ್ಥಳ ಯೋಜನೆಯ ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ಲೀಲಾವತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುದ್ರಾಡಿ ಮಂಜುನಾಥ ಪೂಜಾರಿ, ಕಾರ್ಕಳದ ಶುಭದ್‌ ರಾವ್‌, ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರನಾಥ ಬಂಗೇರ, ಚಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಹೆಬ್ರಿಯ ಉದ್ಯಮಿ ಸತೀಶ ಪೈ, ಹೆಬ್ರಿ ಪ್ರವೀಣ್‌ ಬಲ್ಲಾಳ್‌, ಉಡುಪಿಯ ಎಂ.ಎ.ಗಫೂರ್‌, ಡಾ.ಸಂತೋಷ ಕುಮಾರ್‌ ಶೆಟ್ಟಿ ಅಜೆಕಾರು, ಹೆಬ್ರಿ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರಾಜ ಶೆಟ್ಟಿ, ಮುನಿಯಾಲು ಗೋಪಿನಾಥ ಭಟ್‌, ಎಚ್.ವಾದಿರಾಜ ಶೆಟ್ಟಿ ಹೆಬ್ರಿ ಭಾಗವಹಿಸುವರು.
ಸುದ್ದಿಗೋಷ್ಠಿಯಲ್ಲಿ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಹೆಬ್ರಿ ಕಾರ್ಕಳ ಇದರ ಕಾರ್ಯದರ್ಶಿ ನವೀನ್‌ ಕೆ ಅಡ್ಯಂತಾಯ, ಕೋಶಾಧಿಕಾರಿ ಎಚ್.ಜನಾರ್ಧನ್‌, ಚಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಶೆಟ್ಟಿ, ಹೆಬ್ರಿ ಗ್ರಾಮ ಪಂಚಾಯಿತಿ ಸದಸ್ಯ ಹೆಚ್.ಬಿ.ಸುರೇಶ್‌, ಹೆಬ್ರಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ ಶೇರಿಗಾರ್‌, ಸಂಸ್ಮರಣಾ ಗ್ರಂಥದ ಸಂಪಾದಕ ಟಿ.ಜಿ.ಆಚಾರ್ಯ ಹೆಬ್ರಿ, ವಿವಿಧ ಪ್ರಮುಖರಾದ ದಯಾನಂದ ಶೆಟ್ಟಿ ಚಾರ, ಹರೀಶ ಶೆಟ್ಟಿ ನಾಡ್ಪಾಲು, ನಿಲೇಶ ಪೂಜಾರಿ, ದೀಪಕ್‌ ಶೆಟ್ಟಿ ದೊಂಡೆರಂಗಡಿ, ಪ್ರಕಾಶ ಶೆಟ್ಟಿ ಹೆಬ್ರಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here