ಮೂಡುಬಿದಿರೆ: ಕರ್ನಾಟಕ ಸರಕಾರ ಗ್ಯಾರಂಟಿ ಅನುಷ್ಠಾನ ಯೋಜನಾ ಸಮಿತಿ ಮೂಡುಬಿದಿರೆ ತಾಲೂಕು, ಬಂಟರ ಮಹಿಳಾ ಘಟಕ, ಮೂಡುಬಿದಿರೆ, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ನಾಳೆ (ಶನಿವಾರ – ಜು.5) ಬೆಳಿಗ್ಗೆ 9 ಗಂಟೆಯಿಂದ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ.
ಗ್ಯಾರಂಟಿ ಯೋಜನಾ ಸಮಿತಿಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಿಬಿರವನ್ನು ಡಾ.ಮೋಹನ ಆಳ್ವ ಅವರು ಉದ್ಘಾಟಿಸಲಿದ್ದಾರೆ.
ಆಳ್ವಾಸ್ ನ ಡಾ.ಹನಾ ಶೆಟ್ಟಿ ಅವರು ಶಿಬಿರದ ಮಾಹಿತಿಯನ್ನು ನೀಡಲಿದ್ದು ಮಾಜಿ ಸಚಿವ ಕೆ.ಅಭಯಚಂದ್ರ, ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕೆ.ಪಿ.ಸಿ.ಸಿ.ಕಾರ್ಯದರ್ಶಿ ಮಿಥುನ್ ರೈ,ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಿ.ಕುಸುಮಾಧರ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ತಜ್ಞರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು,ಎಲುಬು ಮತ್ತು ನರರೋಗ ತಜ್ಞರು ಭಾಗವಹಿಸಲಿದ್ದು ಉಚಿತ ತಪಾಸಣೆ ಮತ್ತು ಚಿಕಿತ್ಸೆ, ಬಿ.ಪಿ, ಬ್ಲಡ್ ಶುಗರ್ ಟೆಸ್ಟ್, ಹಿಮೋಗ್ಲೋಬಿನ್ ಟೆಸ್ಟ್ ವ್ಯವಸ್ಥೆ ಇದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಹಾಗೂ ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಶೋಭಾ ಎಸ್.ಶೆಟ್ಟಿ ಅವರು ವಿನಂತಿಸಿದ್ದಾರೆ.