ಮಂಗಳೂರು: ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನ ಬಂಧನ

0
96

ಮಂಗಳೂರಿನಲ್ಲಿ ಸ್ಥಾಪನೆಯಾದ ಸ್ಪೆಷಲ್ ಆ್ಯಕ್ಷನ್ ಫೋರ್ಸ್​ ಫುಲ್​ ಆ್ಯಕ್ಟೀವ್​

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಸ್ಥಾಪನೆಯಾದ ಸ್ಪೆಷಲ್ ಆ್ಯಕ್ಷನ್ ಫೋರ್ಸ್​ ಫುಲ್​ ಆ್ಯಕ್ಟೀವ್​ ಆಗಿದ್ದು,​​ ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಓರ್ವ ಯುವಕನನ್ನು ಬಂಧಿಸಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಸ್ಥಾಪಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಈ ಸಂಸ್ಥೆ ಈಗಾಗಲೇ ಫುಲ್ ಆಕ್ಟಿವ್​ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್  ಹಾಕುವವರನ್ನು ಬೆನ್ನಟ್ಟಿ ಬೆಂಡೆತ್ತುತ್ತಿದೆ.

ಉಡುಪಿ ಜಿಲ್ಲೆಯ ಕಾರ್ಕಳ, ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್​​ ಎಂಬಾತನನ್ನು ಸ್ಪೆಷಲ್ ಆ್ಯಕ್ಷನ್ ಫೋರ್ಸ್​ ಬಂಧಿಸಿದೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”. “ಜೀವಕ್ಕೆ ಜೀವನೇ ಬೇಕು” ಎಂದು ಮಾರಕಾಯುಧಗಳ ಚಿಹ್ನೆ ಬಳಸಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ. ಈ ಹಿನ್ನಲೆ ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, BNS ಕಲಂ.196, 353(2),351(3) ಯಡಿ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್‌ಗೆ ಇತ್ತೀಚೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಂಗಳೂರಿನಲ್ಲಿ ಚಾಲನೆ ನೀಡಿದ್ದರು. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಕಾರ್ಯಾಚರಣೆ ನಡೆಸಿದೆ.

ಮಂಗಳೂರು ನಗರ ಕೇಂದ್ರದಲ್ಲಿಯೇ ಎಸ್ಎಎಫ್ ಕಾರ್ಯಪಡೆಯ ಕೇಂದ್ರ ಕಛೇರಿ ಇದೆ. ನಕ್ಸಲ್ ನಿಗ್ರಹ ಪಡೆಯಲ್ಲಿದ್ದ 656 ಸಿಬ್ಬಂದಿಗಳ ಪೈಕಿ 248 ಮಂದಿ ಈ ಹೊಸ ಪಡೆಯಲ್ಲಿದ್ದಾರೆ. ಡಿಐಜಿ, ಡಿವೈಎಸ್ಪಿ, ಸಹಾಯಕ ಕಮಾಂಡೆಂಟ್, 4 ಇನ್ ಸ್ಪೆಕ್ಟರ್, 16 ಪಿಎಸ್ಐ ಸೇರಿದಂತೆ 248 ಸಿಬ್ಬಂದಿ ತಂಡದಲ್ಲಿ ಇದ್ದಾರೆ.

LEAVE A REPLY

Please enter your comment!
Please enter your name here