ಕಳಪೆ ಗುಣಮಟ್ಟ, ಅರ್ಧ ಹೆಲ್ಮೆಟ್ ಮಾರಾಟ: ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

0
39

ಬೆಂಗಳೂರು: ಶನಿವಾರ (ಜು.05) ಬೆಳ್ಳಂ ಬೆಳಿಗ್ಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಆರ್​ಟಿಓ  ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ ಅಂಗಡಿ ಮತ್ತು ಮಳಿಗೆಗಳ ಮೇಲೆ ದಾಳಿ ಮಾಡಿದರು. ನಿಷೇಧ ಇದ್ದರೂ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

19 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ ಆರು ಅಂಗಡಿಗಳಿಗೆ 50,000 ರೂ. ದಂಡ ವಿಧಿಸಲಾಗಿದೆ ಮತ್ತು ನೋಟೀಸ್ ಜಾರಿ ಮಾಡಲಾಗಿದೆ. ಕಳಪೆ ಹೆಲ್ಮೆಟ್ ಧರಿಸಿದ 38 ಬೈಕ್ ಸವಾರರಿಗೂ ದಂಡ ವಿಧಿಸಲಾಗಿದೆ. ಐಎಸ್ಐ ಮಾರ್ಕ್ ಇಲ್ಲದ ಅಥವಾ ಅರ್ಧ ಹೆಲ್ಮೆಟ್ ಧರಿಸುವುದು ಅಪಾಯಕಾರಿ ಮತ್ತು ಕಾನೂನುಬಾಹಿರ ಎಂದು ಎಚ್ಚರಿಸಲಾಗಿದೆ. ಅಧಿಕಾರಿಗಳು ನಗರದ ಸಿದ್ಧಯ್ಯ ರಸ್ತೆ, ಕಲಾಸಿಪಾಳ್ಯ ರಸ್ತೆ, ಲಾಲ್ ಬಾಗ್ ರಸ್ತೆ, ಮಾಗಡಿ ರಸ್ತೆ, ಸುಮನಹಳ್ಳಿ, ವಿಜಯನಗರ, ಅಗ್ರಹಾರ ದಾಸರಹಳ್ಳಿ, ನಾಗರಭಾವಿ, ಔಟರ್ ರಿಂಗ್ ರಸ್ತೆ ಸೇರಿದಂತೆ ಒಟ್ಟು 19 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಕಳಪೆ ಗುಣಮಟ್ಟದ ಮತ್ತು ಅರ್ಧ ಹೆಲ್ಮೆಟ್​ ಮಾಡುತ್ತಿದ್ದ ಆರು ಅಂಗಡಿಗಳಿಗೆ ಮಾಪನ ಇಲಾಖೆ 50 ಸಾವಿರ ರೂ. ದಂಡ ವಿಧಿಸಿದೆ. ಜೊತೆಗೆ, ದಿ ಲೀಗಲ್ ಮೆಟ್ರಾಲಜಿ ಕಾಯ್ದೆ (ಮಾಪನಶಾಸ್ತ್ರ ಕಾಯ್ದೆ) ಅಡಿ ನೋಟಿಸ್ ನೀಡಿದೆ. 13 ಅಂಗಡಿ ಮಾಲೀಕರಿಗೆ ಕೋರ್ಟ್​ನಲ್ಲಿ ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ಅಧಿಕಾರಿಗಳು ಕಳಪೆ ಹಾಗೂ ಅರ್ಧ ಹೆಲ್ಮೆಟ್​ಗಳನ್ನು ಜಪ್ತಿ ಮಾಡಿದರು.

LEAVE A REPLY

Please enter your comment!
Please enter your name here