ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಅದಲು ಬದಲು ಮಾಡಿರುವ ಆರೋಪ ಕೇಳಿಬಂದಿದೆ. ಗಂಡು ಮಗು ಕೊಟ್ಟು ಬಳಿಕ ಹೆಣ್ಣು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಸದ್ಯ ಸಿಂಧನೂರು ನಗರ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ.
ಸಿಂಧನೂರು ತಾಲ್ಲೂಕಿನ ಗಾಂಧಿನಗರದ ಹುಲ್ಲಪ್ಪ ಹಾಗೂ ರೇವತಿ ದಂಪತಿ ಮಗು ಅದಲು-ಬದಲು ಮಾಡಿರುವ ಆರೋಪ ಕೇಳಿಬಂದಿದೆ. ಹೆರಿಗೆ ಬಳಿಕ ರೇವತಿಗೆ ಗಂಡು ಮಗು ನೀಡಿ ಎದೆ ಹಾಲುಣಿಸಲು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.
ಆದರೆ ಆ ಬಳಿಕ ತಮ್ಮ ವರಸೆ ಬದಲಾಯಿಸಿದ ಆಸ್ಪತ್ರೆ ಸಿಬ್ಬಂದಿ ರೇವತಿ ಅವರಿಗೆ ನಿಮಗೆ ಹೆಣ್ಣು ಮಗು ಹುಟ್ಟಿದೆ. ಗಂಡು ಮಗು ಅಲ್ಲ ತಪ್ಪಾಗಿದೆ ಎಂದಿದ್ದಾರೆ. ನಿಮಗೆ ಸಿಸೇರಿಯನ್ ಆಗಿ ಹೆಣ್ಣು ಮಗು ಹುಟ್ಟಿದೆ ಎಂದು ನರ್ಸ್ಗಳು ಹೇಳಿದ್ದಾರೆ. ಹೀಗಾಗಿ ಆಸ್ಪತ್ರೆ ನಡೆ ಬಗ್ಗೆ ರೇವತಿ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.