ಸೆ. 14-21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

0
19

ಉಜಿರೆ: ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೆ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿಗಳಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.
ಸೆಪ್ಟೆಂಬರ್ 14 ಎಂದು ಆರಂಭಗೊಂಡು 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ. ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಇದುವರೆಗೆ ಇಲ್ಲಿನ ಭಜನಾ ಕಮ್ಮಟದಲ್ಲಿ ಭಾಗವಹಿಸದೆ ಇರುವವರಾಗಿರಬೇಕು. ಒಂದು ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಅವಕಾಶವಿದ್ದು, ತಾವು ಕಲಿತು ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸಂಬಂಧಪಟ್ಟವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9663464648, 8147263422, 08256-266644
ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು.

LEAVE A REPLY

Please enter your comment!
Please enter your name here