ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ

0
28

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮಾಣಿ ವಲಯದ ಶೌರ್ಯ ತಂಡದ ಸದಸ್ಯರು ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣು ಹಂಪಲುಗಳ ಗಿಡಗಳನ್ನು ನೆಡುವುದರೊಂದಿಗೆ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಮಾತನಾಡಿ ಹಸಿರು ನಮ್ಮೆಲ್ಲರ ಉಸಿರು ಮುಂದಿನ ಪೀಳಿಗೆಗೆ ಮರ-ಗಿಡಗಳನ್ನು ಬೆಳೆಸಿ ಪೋಷಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವೆಂದು ಎಂದರು.

ಈ ಸಂದರ್ಭದಲ್ಲಿ ಪರಿಸರ ಬಗ್ಗೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮಾಣಿ ವಲಯದ ಶೌರ್ಯ ತಂಡದ ಸಂಯೋಜಕ ಸತೀಶ್, ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಹರೀಶ್ ಕುಲಾಲ್, ಶೌರ್ಯ ತಂಡದ ಸದಸ್ಯರುಗಳು, ಒಕ್ಕೂಟ ಸೇವಾ ಪ್ರತಿನಿಧಿ ಪುಷ್ಪ,ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿ, ಶಿಕ್ಷಕಿ ದೀಕ್ಷಾ ವಂದಿಸಿ, ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಐಸಮ್ಮರವರು ಸಹಕರಿಸಿದರು.

LEAVE A REPLY

Please enter your comment!
Please enter your name here