ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ತೀರ್ಪುಗಾರ ವಿನೋದ್ ಕುಮಾರ್ ಎಂ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ (ಮಾಸ್ಟರ್ 3) 74 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಅವರು ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿಯಾಗಿದ್ದು, ಬಾಲಾಂಜ ನೇಯ ಜಿಮ್ನ ಏಕಲವ್ಯ ಪ್ರಶಸ್ತಿ ಪುರಸ್ಕೃತ, ಪವರ್‌ಲಿಫ್ಟಿಂಗ್ ಇಂಡಿಯಾದ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ ಅವರ ಶಿಷ್ಯ.