ಮಂಗಳೂರು: ಮಂಗಳೂರಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಕಡಲು ಪ್ರಕ್ಷುಬ್ಧವಾಗಿದೆ. ತಿರುವನಂತಪುರಂನ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಿದ್ದಾರೆ.
ಸದ್ಯ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಕಡಲು ಪ್ರಕ್ಷುಬ್ಧಗೊಂಡಿದೆ. ಆದ್ದರಿಂದ ಮೀನುಗಾರರು ಮೀನುಗಾರಿಕೆಗೆ ಕಡಲಿಗಿಳಿಯದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಮುನ್ನೆಚ್ಚರಿಕೆ ನೀಡಿದ್ದಾರೆ.
ವನಂತಪುರಂನ ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಜುಲೈ 17 ರವರೆಗೆ ಅರಬ್ಬಿಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸಲಿದೆ. ಪರಿಣಾಮ ಕಡಲು ಪ್ರಕ್ಷುಬ್ದವಾಗಿರುತ್ತದೆ.