ಜುಲೈ 18 : ತುಳು ಅಕಾಡೆಮಿ ವತಿಯಿಂದ ‘ಪಗಪು’ ನಾಟಕ ಪ್ರಥಮ ಪ್ರದರ್ಶನ

0
54

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ತುಳು ನಾಟಕ ಕಾರ್ಯಾಗಾರದಲ್ಲಿ ಅಮೃತ ಕಾಲೇಜಿನ ವಿದ್ಯಾರ್ಥಿಗಳಿಂದ ಸಿದ್ಧಗೊಂಡ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನ ಜು.18ರಂದು ಅಪರಾಹ್ನ 2.30ಕ್ಕೆ ಬಲ್ಮಠ ಸರಕಾರಿ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಹಿರಿಯ ನಿರ್ದೇಶಕರಾದ ಜಗನ್ ಪವಾರ್ ಬೇಕಲ್ ಅವರು ನಿರ್ದೇಶನ ಮಾಡಿರುವ ಈ ನಾಟಕದ ಪ್ರಥಮ ಪ್ರದರ್ಶನದ ಉದ್ಘಾಟನೆಯನ್ನು ಜಿ.ಎಸ್.ಟಿ. ಹಾಗೂ ಆದಾಯ ತೆರಿಗೆ ಸಲಹೆಗಾರರಾದ ಯು. ಪುಂಡರೀಕಾಕ್ಷ ಮೂಲ್ಯ ನಡೆಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸಲಿರುವರು. ಇಂಟಾಕ್ ಮಂಗಳೂರು ಘಟಕದ ಸಂಚಾಲಕರಾದ ಸುಭಾಷ್ ಬಸು, ಅಮೃತ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಹಾಸ ಕಣ್ವತೀರ್ಥ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಕುಂಬ್ರ ದುರ್ಗಾ ಪ್ರಸಾದ್ ರೈ , ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವನಿತಾ ದೇವಾಡಿಗ ಉಪಸ್ಥಿತರಿರುವರು ಎಂದು ತುಳು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here