ಭಾರೀ ಮಳೆ; ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

0
59

ಮಂಗಳೂರು: ಜುಲೈ 19 ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎರಡು ತಾಲ್ಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು ತಾಲ್ಲೂಕಿನಲ್ಲಿ ಅಂಗನವಾಡಿಯಿಂದ ಹಿಡಿದು ದ್ವಿತೀಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದರೆ, ಬಂಟ್ವಾಳ ತಾಲೂಕಿನಲ್ಲಿ ಪ್ರೌಢ ಶಾಲೆವರೆಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಈಗಾಗಲೇ ಈ ಹಿಂದೆಯೂ ಸಹ ಈ ಭಾಗಗಳಲ್ಲೇ ಹೆಚ್ಚಿನ ಮಳೆಯಾದಂತಹ ಸಂದರ್ಭದಲ್ಲಿ ರಜೆಗಳನ್ನು ನೀಡಲಾಗಿದ್ದು, ಇವುಗಳನ್ನು ಸರಿದೂಗಿಸುವ ಕೆಲಸ ಸಹ ನಡೆಯುತ್ತಿದೆ.

LEAVE A REPLY

Please enter your comment!
Please enter your name here