ಉಪ್ಪಿನಂಗಡಿ: ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಹವ್ಯಕ ಬ್ರಾಹ್ಮಣ ವಿಧಿಗಳೊಂದಿಗೆ ಉಪ್ಪಿನಂಗಡಿಯ ಸಮೀಪದ ಅವರ ಮನೆಯಲ್ಲಿ ನಡೆಯಲಿದೆ. ಧರ್ಮಸ್ಥಳ ಮೇಳದಲ್ಲಿ ಸುಮಾರು 18 ವರ್ಷಗಳ ಕಾಲ ಸ್ತ್ರೀ ಪಾತ್ರಗಳನ್ನು ನಿರ್ವಹಿಸಿದ್ದರು. ಮತ್ತು ಪ್ರಗತಿಪರ ಕೃಷಿಕರೂ ಆಗಿದ್ದು, ಯಕ್ಷಗಾನದ ಸ್ತ್ರೀ ಪಾತ್ರಗಳ ಕುರಿತು ಅಧ್ಯಯನ ಮತ್ತು ಸಂಶೋಧನೆಗಳನ್ನು ಕೂಡಾ ಮಾಡಿದ್ದರು.